ಉಪ್ಪಿನಂಗಡಿ: ಯೋಜನೆಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಬೇಕಾದರೆ ಅಧಿಕಾರಿಗಳ ಪಾತ್ರ ಹಿರಿದು. ಶಾಸಕಾಂಗ ತರುವ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಕೆಲಸ ಅಧಿಕಾರಿಗಳದ್ದಾಗಿದೆ. ಈ ನಿಟ್ಟಿ. ಜಿಲ್ಲೆಯ ಜಿಲ್ಲಾಧಿಕಾರಿ, ಎಸ್ಪಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕಚೇರಿಗೆ ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ಮಾತನಾಡಿ ಅವರ ಸಮಸ್ಯೆ ಪರಿಹರಿಸುವ ಕೆಲಸವನ್ನು ಸರ್ಕಾರಿ ಅಧಿಕಾರಿಗಳು ಮಾಡಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.ಪೆರ್ನೆಯ ಎ.ಎಂ.ಆಡಿಟೋರಿಯಂನಲ್ಲಿ ಶನಿವಾರ ಬಂಟ್ವಾಳ ತಾಲೂಕುಮಟ್ಟದ ಪ್ರಜಾ ಸೇವೆ ಆಂದೋಲನ ಉದ್ಘಾಟಿಸಿ ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ, ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.