* ಸಿಎಂ ಡಿ.ಕೆ. ಶಿವಕುಮಾರ್ಗೆ ಶಾಸಕ ಯಶ್ಪಾಲ್ ಮನವಿಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನರಿಗಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ 50 ಕೋಟಿ. ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಉಚ್ಚಿಲ ಮಹಾಲಕ್ಷ್ಮೀ ದೇಗುಲಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬೇಡಿಕೆಗಳ ಮನವಿ ಸಲ್ಲಿಸಿದರು.ಜಿಲ್ಲೆಯಲ್ಲಿರುವ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಅವರ ಸಹಾಯಕಿಯರು, ವಿಶೇಷ ಚೇತನ ಮಕ್ಕಳ ಶಿಕ್ಷಕರು, ದೇವಸ್ಥಾನಗಳ ಅರ್ಚಕರು ಮತ್ತು ಸಿಬ್ಬಂದಿ ಹಾಗೂ ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಕಲ್ಪಿಸಬೇಕು.