ಮಂಜೇಶ್ವರ: ಗಡಿನಾಡು ಮತ್ತು ಹೊರನಾಡು ಕನ್ನಡಿಗರನ್ನು ಒಳಗೊಂಡಂತೆ ಕರ್ನಾಟಕ ಸರ್ಕಾರ ವಿಶೇಷ ಸಾಂಸ್ಕೃತಿಕ ನೀತಿ ರೂಪಿಸಬೇಕು. ಅವರ ಅಭಿವೃದ್ಧಿಗಾಗಿ ಪ್ರತಿ ಬಜೆಟ್ನಲ್ಲೂ ವಿಶೇಷ ಆರ್ಥಿಕ ಪ್ಯಾಕೇಜ್. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಪುವೆಂಪು ಪ್ರತಿಷ್ಠಾನ, ಬದಿಯಡ್ಕದ ತುಳು ಭವನ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಮಂಜೇಶ್ವರದ ಗಿಳಿವಿಂಡು ಆವರಣದ ಪಾರ್ತಿಸುಬ್ಬ ವೇದಿಕೆಯಲ್ಲಿ ಶನಿವಾರ ನಡೆದ ಬಹುಭಾಷಾ ವಿದ್ವಾಂಸ ಡಾ.ಪಿ.ವೆಂಕಟರಾಜ ಪುಣಿಂಚಿತ್ತಾಯರ ‘ಪುವೆಂಪು ನೆನಪು-2026’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಗಡಿನಾಡು, ಹೊರನಾಡು ಕನ್ನಡಿಗರಿಗೆ ಉದ್ಯೋಗ, ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಕರ್ನಾಟಕದ ಕನ್ನಡಿಗರಿಗೆ ದೊರೆಯುವ ಸೌಲಭ್ಯಗಳು ಲಭ್ಯವಾಗಬೇಕು.