ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಕುರಿತು ದೂರು ದಾಖಲಿಸಿದ್ದಾರೆ ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕಾರ್ಯಾಚರಣೆಯ ಹಿಂದಿರುವ ವ್ಯಕ್ತಿಗಳು ಮತ್ತು ಮಹಿಳೆಯನ್ನು ಪತ್ತೆಹಚ್ಚಿ, ಅವರ ಹಿಂದೆ ಯಾರಿದ್ದಾರೆ ಎಂಬುದನ್ನು ಬಯಲಿಗೆ ತರುವುದೇ ದೂರಿನ ಉದ್ದೇಶ. ಪಾರದರ್ಶಕ ಪೊಲೀಸ್ ತನಿಖೆಯಿಂದ ಸತ್ಯ ಹೊರಬರಲಿದೆ ಎಂದು ಯತೀಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು, ಅಕ್ಟೋಬರ್ 26: ‘ಮಾಜಿ ಸಿಎಂ ಸಿದ್ದರಾಮಯ್ಯ ಯಾವುದೇ ತೊಂದರೆ ಕೊಟ್ಟಿಲ್ಲ. ನನಗೆ ಹೇಳಿಕೊಟ್ಟಹಾಗೆ ನಾನು ಹೇಳಿದ್ದೆ’ ಎಂದು ಸ್ಟಿಂಗ್ ಪ್ರಕರಣದ ಸಂತ್ರಸ್ತೆ ಎನ್ನಲಾದ ಮಹಿಳೆ ಸಿಸಿಬಿ ವಿಚಾರಣೆ ವೇಳೆ ಹೇಳಿರುವ ಬಗ್ಗೆ ಸಚಿವ ಯತೀಂದ್ರ ಪ್ರತಿಕ್ರಿಯಿಸಿದ್ದಾರೆ.