ಮೈಸೂರು ದಸರಾ ಆಚರಣೆ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, 'ಅರಮನೆ ಬೋರ್ಡ್ ಹಾಗೂ ಜಾಗ ಸರ್ಕಾರದ್ದು' ಎಂದು ಖಾರವಾಗಿ ತಿಳಿಸಿದ್ದಾರೆ. ಅವರು ಹೇಳಿದ ರೀತಿ 7 ದಿನ ದಸರಾ ಮಾಡಲು ಸಾಧ್ಯವಿಲ್ಲ. ದಸರಾ ಸರ್ಕಾರದ್ದಲ್ಲ ಎಂಬ ಪದ ಬಳಕೆಯೂ ಸರಿಯಲ್ಲ. ಅಂಬಾರಿ ಆನೆ ಬಗ್ಗೆ ಕಾನೂನು ಪ್ರಕಾರ ಹೇಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ.