ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್ಪ್ರೆಸ್ವೇನಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನಗಳು ಸರಣಿ ಅಪಘಾತಕ್ಕೀಡಾಗಿವೆ. ಸುಲ್ತಾನ್ಪುರ ನ್ಯಾಯಾಲಯಕ್ಕೆ ತೆರಳುತ್ತಿದ್ದಾಗ ನಡೆದ ಈ ಘಟನೆಯಲ್ಲಿ 5 ವಾಹನಗಳು ಜಖಂಗೊಂಡಿದ್ದು, ಹಲವು ಕಾರ್ಯಕರ್ತರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ರಾಹುಲ್ ಗಾಂಧಿ ಅವರು ಸುರಕ್ಷಿತವಾಗಿದ್ದಾರೆ. ಸುಲ್ತಾನ್ಪುರ, ಅಕ್ಟೋಬರ್ 26: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನ (ಕಾನ್ವಾಯ್) ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್ಪ್ರೆಸ್ವೇನಲ್ಲಿ ಸರಣಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಸುಲ್ತಾನ್ಪುರ ಜಿಲ್ಲೆಯ ಹಲಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲೋಮೀಟರ್ ಸಂಖ್ಯೆ 91ರ ಬಳಿ ಈ ಭೀಕರ ಅವಘಡ ಸಂಭವಿಸಿದೆ.