ಕೊಚ್ಚಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ, ನ್ಯಾಯಾಧೀಶರ 17 ವರ್ಷದ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು ಬೈಕ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪ್ರಾಪ್ತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ಮೃತನ ಕುಟುಂಬಸ್ಥರು ತನಿಖೆ ಹಾದಿತಪ್ಪಿಸಲು ಮತ್ತು ಸಾಕ್ಷ್ಯ ನಾಶಪಡಿಸಲು ಯತ್ನಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣದಲ್ಲಿ ನ್ಯಾಯಾಧೀಶರ ಪ್ರಭಾವದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಕೊಚ್ಚಿ, ಅ.26: ಕೇರಳದ ಕೊಚ್ಚಿಯಲ್ಲಿ ಅತ್ಯಂತ ಬೆಚ್ಚಿಬೀಳಿಸುವ ಅಪಘಾತವೊಂದು ಸಂಭವಿಸಿದೆ. ತ್ರಿಸ್ಸೂರ್ನ ಸ್ಥಳೀಯ ನ್ಯಾಯಾಲಯದ ನ್ಯಾಯಾಧೀಶರೊಬ್ಬರ 17 ವರ್ಷದ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಐಷಾರಾಮಿ ಮರ್ಸಿಡಿಸ್ ಬೆಂಜ್ (Mercedes-Benz) ಕಾರು, ಬೈಕ್ಗೆ ಭೀಕರವಾಗಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.