ಎಸ್ಐಆರ್ ಪ್ರಕ್ರಿಯೆಯನ್ನು ಕೈಗೊಳ್ಳುವ ತಮ್ಮ ನಿರ್ಧಾರವನ್ನು ಭಾರತೀಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಈ ಕಾರ್ಯವಿಧಾನವನ್ನು ಕಾನೂನುಬದ್ಧವಾಗಿ ನಡೆಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಮೂರೂ ಆದೇಶಗಳನ್ನು ಆಯೋಗದ ಮೂವರೂ ಸದಸ್ಯರು ಸರ್ವಾನುಮತದಿಂದ ಅನುಮೋದಿಸಿದ್ದಾರೆ ಎಂದು ಆಯೋಗ ತಿಳಿಸಿದೆ. ವಿರೋಧ ಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದ ಚುನಾವಣಾ ಆಯೋಗ ಇಂದು ಸುಪ್ರೀಂ ಕೋರ್ಟ್ನಲ್ಲಿ ಪ್ರತಿ-ಅಫಿಡವಿಟ್ ಸಲ್ಲಿಸಿದೆ. ನವದೆಹಲಿ, ಅಕ್ಟೋಬರ್ 26: ದೇಶಾದ್ಯಂತ ವ್ಯಾಪಕ ರಾಜಕೀಯ ಚರ್ಚೆ ಮತ್ತು ವಿರೋಧ ಪಕ್ಷಗಳ ಆಕ್ಷೇಪಕ್ಕೆ ಕಾರಣವಾಗಿರುವ 'ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ' (ಎಸ್ಐಆರ್) ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ.