ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ 'ಅರ್ನಬ್' ಚಂಡಮಾರುತವು ತೀವ್ರರೂಪ ಪಡೆದುಕೊಂಡು ಆಂಧ್ರಪ್ರದೇಶದ ಕರಾವಳಿಯತ್ತ ಭರದಿಂದ ಸಾಗುತ್ತಿದ್ದು, ಅಕ್ಟೋಬರ್ 28ರ ಬೆಳಿಗ್ಗೆ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಆಂಧ್ರಪ್ರದೇಶ, ಒಡಿಶಾ, ತೆಲಂಗಾಣ, ಛತ್ತೀಸ್ಗಢ ಮತ್ತು ಪುದುಚೇರಿ ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ ಘೋಷಿಸಿದೆ. ಆಂಧ್ರಪ್ರದೇಶದ ಕರಾವಳಿಯತ್ತ ಧಾವಿಸುತ್ತಿರುವ 'ಅರ್ನಬ್' ಚಂಡಮಾರುತದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ 60ಕ್ಕೂ ಹೆಚ್ಚು ಪ್ರಮುಖ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. 2 ರೈಲುಗಳ ಮಾರ್ಗವನ್ನು ಬದಲಾಯಿಸಿವೆ.