ನಟ ಝೈದ್ ಖಾನ್ ವಿರುದ್ಧ ನಟ ಧನ್ವೀರ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಚಾಮರಾಜಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಧನ್ವೀರ್ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿರುವ ಜಮೀರ್ ಅಭಿಮಾನಿಗಳು, ಕ್ಷಮೆ ಕೇಳದಿದ್ದರೆ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವಿವಾದ ದಿನ ಕಳೆದಂತೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. . ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಹಾಗೂ ನಟ ಝೈದ್ ಖಾನ್ ವಿರುದ್ಧ ನಟ ಧನ್ವೀರ್ ಗೌಡ ಅವಾಚ್ಯ ಪದಗಳಿಂದ ನಿಂದಿಸಿರುವ ಆರೋಪ ಕೇಳಿಬಂದಿದೆ.