ಯಾದಗಿರಿ: ಕ್ರೀಡೆಗಳು ಮಾನಸಿಕ ಮತ್ತು ದೈಹಿಕವಾಗಿ ಗಟ್ಟಿಗೊಳಿಸುವ ಮೂಲಕ ಉತ್ತಮ ಆರೋಗ್ಯ ಹೊಂದಲು ಬಹಳ ಸಹಕಾರಿಯಾಗುತ್ತದೆ ಎಂದು ಶಾಸಕ ಶರಣಗೌಡ ಕಂದಕೂರ ಹೇಳಿದರು.ಇಲ್ಲಿನ ಟೆನಿಸ್ ಕ್ಲಬ್ನಿಂದ ಆಫ. ಸೋಲೆ ಗೆಲಿವಿನ ಮೆಟ್ಟಿಲು ಎಂಬ ಭಾವನೆಯಲ್ಲಿ ಮತ್ತು ಸ್ಪರ್ಧಾತ್ಮಕ ಮನಸ್ಸಿನಿಂದ ಆಟಗಾರರು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಕಿವಿಮಾತು ಹೇಳಿದರು. ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಇಂದು ಕ್ರೀಡೆಗಳಿಗೆ ಬಹಳ ಮಹತ್ವವಿದೆ. ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಮಾನ್ಯತೆ ಸಿಗುತ್ತಿದೆ. ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರಗಳು ಆರ್ಥಿಕ ಸೇರಿ ಇತರೇ ಸೌಲಭ್ಯಗಳು ನೀಡುತ್ತಿವೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಇನ್ನು ಹೆಚ್ಚಿನ ಸಾಧನೆ ಮಾಡಲಿ ಎಂದರು.