ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಶಿವಗಂಗಾ ಬಸವರಾಜ್ ಅವರು ಗೃಹ ಸಚಿವರು ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು, ದಾವಣಗೆರೆ ಜಿಲ್ಲೆಯಲ್ಲಿ ನಡೆಯುತ್ತಿರುವ ಜೂಜಾಟ, ಮಟ್ಕಾ ದಂಧೆಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸ್ ವ್ಯವಸ್ಥೆ ವೈಫಲ್ಯವನ್ನು ಖಂಡಿಸಿ, ಎಸ್ಪಿ ಮತ್ತು ಐಜಿಪಿ ವರ್ಗಾವಣೆಗೆ ಒತ್ತಾಯಿಸಿದ್ದಾರೆ. ದಾವಣಗೆರೆ, ಅ.27: ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು ರಾಜ್ಯ ಗೃಹ ಸಚಿವರು, ಮುಖ್ಯಮಂತ್ರಿಗಳು ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು, ದಾವಣಗೆರೆ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಜೂಜಾಟ, ಮಟ್ಕಾ ಹಾಗೂ ಗಾಂಜಾ ಮಾರಾಟ ದಂಧೆಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.