ಶಿವಮೊಗ್ಗ ಜಿಲ್ಲೆಯ ಕುಂಟುಗೋಡು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಬೋರ್ವೆಲ್ ಕೊರೆದು, ನಲ್ಲಿ ಸಂಪರ್ಕ ಕಲ್ಪಿಸಿದ್ದರೂ ಕಳೆದ ಎರಡು ವರ್ಷಗಳಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಸಿದ್ಧವಿದ್ದ ವ್ಯವಸ್ಥೆ ಬಳಸಿಕೊಳ್ಳಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ಕ್ರಮ ಕೈಗೊಳ್ಳಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಶಿವಮೊಗ್ಗ, ಅ.27: ಜಿಲ್ಲೆಯ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಟುಗೋಡು ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ.