ಭಾರತ-ನ್ಯೂಜಿಲೆಂಡ್ ಸರಣಿಯಲ್ಲಿ ಅಭಿಷೇಕ್ ಮತ್ತು ವೈಭವ್ ಅವರ ಅಸಾಧಾರಣ ಬ್ಯಾಟಿಂಗ್ ಪ್ರದರ್ಶನವನ್ನು ಶ್ರೇಯಸ್ ಅಯ್ಯರ್. ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಗೆಲುವಿನಲ್ಲಿ ಅಭಿಷೇಕ್ ಶರ್ಮಾ ಮತ್ತು 15 ವರ್ಷದ ವೈಭವ್ ಸೂರ್ಯವಂಶಿ ಪ್ರಮುಖ ಪಾತ್ರವಹಿಸಿದರು. ಈ ಇಬ್ಬರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ಆರು ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಟಿ20 ಸರಣಿಯಲ್ಲಿ 3-0 ಮುನ್ನಡೆಯೊಂದಿಗೆ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಹೀಗಾಗಿ ಪಂದ್ಯದ ಬಳಿಕ ಮಾತನಾಡಿದ ಶ್ರೇಯಸ್ ಅಯ್ಯರ್, ಅಭಿಷೇಕ್ ಮತ್ತು ವೈಭವ್ ಅವರ ಸ್ಫೋಟಕ ಬ್ಯಾಟಿಂಗ್ಗೆ ಮನಸೋತಿದ್ದು, ಇವರಿಬ್ಬರ ಪ್ರದರ್ಶನವನ್ನು ಅದ್ಭುತ ಎಂದು ಬಣ್ಣಿಸಿದ್ದಾರೆ.