ಕುಮಟಾ ತಾಲೂಕಿನ ತದಡಿ ಮೀನುಗಾರಿಕಾ ಬಂದರಿನಲ್ಲಿ ಬೋಟ್ನ ಮೀನು ಸಂಗ್ರಹಣಾ ಕೊಠಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಅನಿಲದಿಂದ ಉಸಿರುಗಟ್ಟಿ ಮೂವರು ಮೀನುಗಾರರು ಸಾವನ್ನಪ್ಪಿದ್ದಾರೆ. ನೌಶಾದ್, ಅಮೀನ್, ಅಮನ್ ಮೃತಪಟ್ಟವರು. ಕೊಳೆತ ಮೀನು ಮತ್ತು ರಾಸಾಯನಿಕಗಳಿಂದ ಅನಿಲ ಉತ್ಪತ್ತಿಯಾಗಿ ದುರಂತ ಸಂಭವಿಸಿದೆ. ಗೋಕರ್ಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕುಮಟಾ, ಅ.27: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ತದಡಿ ಮೀನುಗಾರಿಕಾ ಬಂದರಿನಲ್ಲಿ ಅತ್ಯಂತ ಭೀಕರ ಘಟನೆಯೊಂದು ಸಂಭವಿಸಿದ್ದು, ಬೋಟ್ನಲ್ಲಿದ್ದ ಮೀನು ಸಂಗ್ರಹಣಾ ಕೊಠಡಿ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಮೂವರು ಮೀನುಗಾರರು ದುರಂತವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ನೌಶಾದ್ (48), ಅಮೀನ್ (40) ಹಾಗೂ ಅಮನ್ (26) ಎಂದು ಗುರುತಿಸಲಾಗಿದೆ.