ಪಾಂಡವಪುರ: ತಾಲೂಕಿನ ಜಯಂತಿ ನಗರದ ಶ್ರೀ ಶಂಭುಲಿಂಗೇಶ್ವರ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಅ.29 ಮತ್ತು 30ರಂದು ಎರಡು ದಿನಗಳ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಹಮ್ಮಿಕೊಳ್. ಎಂ.ಪಂಚಲಿಂಗೇಗೌಡ ತಿಳಿಸಿದರು.ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಮಂಡ್ಯ ಹಾಗೂ ಶ್ರೀ ಶಂಭುಲಿಂಗೇಶ್ವರ ಎಜುಕೇಷನ್ ಟ್ರಸ್ಟ್ ಸಹಯೋಗದಲ್ಲಿ ನಡೆಯುತ್ತಿರುವ ಕ್ರೀಡಾಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿಲಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿರುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಕ್ರೀಡಾಜ್ಯೋತಿ ಸ್ವೀಕರಿಸಲಿದ್ದು, ಸೆಸ್ಕ್ ಅಧ್ಯಕ್ಷ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗದ ಅಧ್ಯಕ್ಷ ಡಾ.