ಬಿಗ್ ಬಾಸ್ ಕನ್ನಡ ಮನೆಯೊಳಗೆ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಶೆಟ್ಟಿ ಡಾನ್ ಕುಟುಂಬದ ವಿಶೇಷ ಟಾಸ್ಕ್ ವೇಳೆ ಮನೆಗೆ ಆಗಮಿಸಿದ ಅವರಿಗೆ ಸ್ಪರ್ಧಿಗಳು ಅದ್ಧೂರಿ ಸ್ವಾಗತ ಕೋರಿದ್ದಾರೆ. ಈ ಹೊಸ ಟ್ವಿಸ್ಟ್ ಬಿಗ್ ಬಾಸ್ ಮನೆಯಲ್ಲಿ ಯಾವ ಮಟ್ಟದ ಕುತೂಹಲ ಹೆಚ್ಚಿಸಲಿದೆ ಎಂಬುದನ್ನು ವೀಕ್ಷಕರು ಕಾದು ನೋಡಬೇಕಿದೆ. ಬಿಗ್ ಬಾಸ್ ಮನೆಯೊಳಗೆ ಹೊಸ ಸಂಚಲನ ಸೃಷ್ಟಿಯಾಗಿದೆ. ಬಿಗ್ ಬಾಸ್ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಎಂಟ್ರಿ ಕೊಟ್ಟಿದ್ದು, ಸ್ಪರ್ಧಿಗಳಲ್ಲಿ ಹೊಸ ಉತ್ಸಾಹ ಮೂಡಿದೆ.