ತುಮಕೂರು: ಆಗ್ನೇಯ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಬಿಜೆಪಿಯ ಕೆ.ಎಂ.ಸುರೇಶ್ ಪ್ರಚಂಡ ಗೆಲುವು ಸಾಧಿಸಿದ್ದಾರೆ.ಬಿಜೆಪಿಯ ಕೆ.ಎಂ.ಸುರೇಶ್ 660. ಸುರೇಶ್ 23098 ಮತಗಳ ಅಂತರದಿಂದ ಜಯಗಳಿಸಿದ್ದು ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ರ್ನಿಣಯವಾಯಿತು. ಹಾಲಿ ಎಂಎಲ್ಸಿ ಚಿದಾನಂದ ಗೌಡ ಬದಲು ದಾವಣಗೆರೆ ಮೂಲದ ಸುರೇಶ್ರನ್ನು ಬಿಜೆಪಿ ಕಣಕ್ಕಿಳಿಸಿತ್ತು. ಇಬ್ಬರು ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದು ಈ ಬಾರಿ ಬಿಜೆಪಿ-ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಏರ್ಪಟಿತ್ತು. 20076 ಮತ ತಿರಸತ: ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 20076 ಮತಗಳು ತಿರಸತಗೊಂಡಿವೆ. ಕಣದಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿ ಅಭ್ಯರ್ಥಿಗಳಿದ್ದು ಒಟ್ಟು 132138 ಮತ ಚಲಾವಣೆ ಆಗಿತ್ತು.