ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಇವಿಎಂಗಳ ಪಾರದರ್ಶಕತೆ ಮತ್ತು ನಂಬಿಕಾರ್ಹತೆಯನ್ನು ಪ್ರಶ್ನಿಸಿದ್ದ ಕಾಂಗ್ರೆಸ್ ಪಕ್ಷ ಹಾಗೂ 'ಇಂಡಿಯಾ' ಒಕ್ಕೂಟದ ನಾಯಕರು ಮುಂಬರುವ ಎಲ್ಲ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಮೂಲಕವೇ ಮತದಾನ ನಡೆಸಬೇಕು ಎಂದು ನಿರಂತರವಾಗಿ ಪಟ್ಟು ಹಿಡಿದಿದ್ದರು. ಈ ಬಾರಿ ವಿಧಾನಪರಿಷತ್ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಅನ್ನೇ ಬಳಸಲಾಗಿತ್ತು. ಆದರೂ 4 ರಾಜ್ಯಗಳ ಚುನಾವಣೆಯಲ್ಲಿ ಒಂದೇ ಒಂದು ಸೀಟು ಗೆಲ್ಲಲಾಗದೆ ಮುಖಭಂಗ ಅನುಭವಿಸಿರುವ ಕಾಂಗ್ರೆಸ್ ಕುರಿತು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ.