ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ತದಡಿ ಬಂದರಿನಲ್ಲಿ ನಿನ್ನೆ ಆಘಾತಕಾರಿ ದುರಂತ ಸಂಭವಿಸಿದೆ. ಬೋಟ್ನ ಕೋಲ್ಡ್ ಸ್ಟೋರೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಮೀನುಗಾರರು ಸಾವನ್ನಪ್ಪಿದ್ದಾರೆ. ಕೊಳೆತ ಮೀನಿನ ತ್ಯಾಜ್ಯದಿಂದ ಉತ್ಪತ್ತಿಯಾದ ವಿಷಾನಿಲದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರ ಕುಟುಂಬಗಳಿಗೆ ಸಚಿವ ಕೆ.ಎಸ್.ಬಸವಂತಪ್ಪ ತಲಾ 10 ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದ್ದಾರೆ. ಕಾರವಾರ, ಅಕ್ಟೋಬರ್ 28: ಮೀನು ಹಿಡಿದು ಬದುಕು ಕಟ್ಟಿಕೊಳ್ಳಲು ಸಮುದ್ರಕ್ಕಿಳಿದಿದ್ದ ಮೀನುಗಾರರಿಗೆ, ಅದೇ ಮೀನಿನ ತ್ಯಾಜ್ಯ ಮರಣ ಪಾಶವಾಗಿ ಪರಿಣಮಿಸಿದೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ತದಡಿ ಮೀನುಗಾರಿಕಾ ಬಂದರಿನಲ್ಲಿ ಬೋಟ್ನ ಕೋಲ್ಡ್ ಸ್ಟೋರೇಜ್ ಸ್ವಚ್ಛಗೊಳಿಸಲು ಇಳಿದ ಮೂವರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿದ್ದಾರೆ.