ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಮುಂದಿನ ಮುಖ್ಯಮಂತ್ರಿ ಎಂಬ ಅಭಿಮಾನಿ ಘೋಷಣಗೆ ಪ್ರತಿಕ್ರಿಯಿಸಿದ ಅವರು, ನಾನಾಗಲೇ ಆಗಿದ್ದೀನಿ ಎಂದು ಹಾಸ್ಯಭರಿತವಾಗಿ ಪ್ರತಿಕ್ರಿಯಿಸಿದರು. ಬೆನ್ನುನೋವಿದ್ದರೂ, ಹೆಲಿಕಾಪ್ಟರ್ನಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈಶ್ವರ ಖಂಡ್ರೆ, ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಹಾಗೂ ಸ್ವಾಮೀಜಿಗಳು ಈ ವೇಳೆ ಉಪಸ್ಥಿತರಿದ್ದರು. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದು, ಈ ವೇಳೆ ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆ ಅಭಿಮಾನಿಯಿಂದ ಮೊಳಗಿದೆ.