ಟೀಂ ಇಂಡಿಯಾಗೆ ನ್ಯೂಜಿಲೆಂಡ್ ಏಕದಿನ ಸರಣಿ ಮುನ್ನವೇ ದೊಡ್ಡ ಹಿನ್ನಡೆ. ಗಾಯದಿಂದಾಗಿ ವೇಗಿ ಪ್ರಸಿದ್ಧ್ ಕೃಷ್ಣ ಸರಣಿಯಿಂದ ಹೊರಬಿದ್ದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಔಕಿಬ್ ನಬಿ ಅವರನ್ನು ಬದಲಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಪ್ರಸಿದ್ಧ್ ಟೆಸ್ಟ್ ಸರಣಿಗೆ ಫಿಟ್ ಆಗಲು ಬಿಸಿಸಿಐ ಆದ್ಯತೆ ನೀಡಿದೆ, ನವೆಂಬರ್ನಲ್ಲಿ ಅವರ ಫಿಟ್ನೆಸ್ ಪರೀಕ್ಷೆ ನಡೆಯಲಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆಯಾಗಿದೆ. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಧ್ಯವಾಗದ ಕಾರಣ ವೇಗಿ ಪ್ರಸಿದ್ಧ್ ಕೃಷ್ಣ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ವರದಿಗಳು ತಿಳಿಸಿವೆ. ಪಿಟಿಐ ವರದಿ ಪ್ರಕಾರ, ಪ್ರಸಿದ್ಧ್ ಕೃಷ್ಣ ಈ ಸರಣಿಯಲ್ಲಿ ಆಡಲು ಲಭ್ಯವಿರುವುದಿಲ್ಲ(PC-PTI).