ವಂದೇ ಮಾತರಂ ಚರಣಗಳನ್ನು ಮೊಟಕುಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ಬೆಂಗಳೂರು: ವಂದೇ ಮಾತರಂ ರಾಷ್ಟ್ರ ಗೀತೆಯ ಕೆಲವು ಚರಣಗಳನ್ನು ಮೊಟಕುಗೊಳಿಸಿ ಹಾಡುವ ಕುರಿತಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.2026ರ ಸೆಪ್ಟೆಂಬರ್ 8ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ವಕೀಲ ಗಿರೀಶ ಭಾರದ್ವಾಜ್ ಈ ಅರ್ಜಿ ಸಲ್ಲಿಕೆ ಮಾಡಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ. ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮತ್ತು ಕೇಂದ್ರ ಗೃಹ ಸಚಿವಾಲಯವನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.