ಸೋಶಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡುವ ಮೂಲಕ ಗಾಯಕ ಚಂದನ್ ಶೆಟ್ಟಿ ಅವರು ತಮ್ಮ ಹೊಸ ಹಾಡಿನ ಕುರಿತು ಅಂತೆ-ಕಂತೆಗಳಿಗೆ ಪೂರ್ಣವಿರಾಮ ಇಟ್ಟಿದ್ದಾರೆ. ‘ಮೈಮಾಟ’ ಹಾಡಿನ ಸಾಹಿತ್ಯಕ್ಕೂ ತಮ್ಮ ವೈಯಕ್ತಿಕ ಜೀವನದ ಘಟನೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ಚಂದನ್ ಶೆಟ್ಟಿ ಅವರು ಸ್ಪಷ್ಟಪಡಿಸಿದ್ದಾರೆ. ಗಾಯಕ, ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಅವರ ಹೊಸ ಹಾಡು ‘ಮೈಮಾಟ’ ಬಿಡುಗಡೆ ಆದಾಗಿನಿಂದ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಹಾಡಿನಲ್ಲಿ ಇರುವ ಸಾಹಿತ್ಯವನ್ನು ಗಮನಿಸಿದ ವೀಕ್ಷಕರು ಬಗೆಬಗೆಯ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಚಂದನ್ ಶೆಟ್ಟಿ ಅವರ ಮಾಜಿ ಪತ್ನಿ ನಿವೇದಿತಾ ಗೌಡ ಅವರಿಗೆ ಈ ಸಾಹಿತ್ಯ ಸಂಬಂಧಿಸಿದೆ ಎಂದು ಕೆಲವರು ಊಹಿಸಿದ್ದಾರೆ.