ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯವು ನಾಳೆ (ಅಕ್ಟೋಬರ್ 30) ಆಕ್ಲೆಂಡ್ನ ಈಡನ್ ಪಾರ್ಕ್ ಮೈದಾನದಲ್ಲಿ ಜರುಗಲಿದೆ. ಈ ಮಹತ್ವದ ಪಂದ್ಯಕ್ಕೂ ಮುನ್ನ ನ್ಯೂಝಿಲೆಂಡ್ ತಂಡದ ಮೂವರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ. ಬಲಿಷ್ಠ ಬೌಲರ್ಗಳ ಕೊರತೆಯಿಂದ ಕಿವೀಸ್ ಪಡೆ ಕಂಗಾಲಾಗಿದ್ದು, ನಾಳಿನ ಪಂದ್ಯದಲ್ಲೂ ಟೀಮ್ ಇಂಡಿಯಾ ಬ್ಯಾಟರ್ಗಳಿಂದ ಪ್ರಚಂಡ ಬ್ಯಾಟಿಂಗ್ ಪ್ರದರ್ಶನವನ್ನು ನಿರೀಕ್ಷಿಸಬಹುದಾಗಿದೆ. ಟೀಮ್ ಇಂಡಿಯಾ ವಿರುದ್ಧ ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ನಡೆಯಲಿರುವ 4ನೇ ಟಿ20 ಪಂದ್ಯಕ್ಕೂ ಮುನ್ನ ಆತಿಥೇಯ ನ್ಯೂಝಿಲೆಂಡ್ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ.