Namit Malhotra revealed the choice of Yash in Ramayana movie as RAVANA-ರಾಮಾಯಣದ 'ರಾವಣ' ಪಾತ್ರಕ್ಕೆ ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅಯ್ಕೆಯಾದ ಅಸಲೀ ಕಾರಣ ಬಿಚ್ಚಿಟ್ಟ ನಿರ್ಮಾಪಕ ನಮಿತ್ ಮಲ್ಹೋತ್ರಾ! ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಘೋಷಣೆಯಾದ ದಿನದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸದ್ದು ಮಾಡುತ್ತಲೇ ಇದೆ. ಬಾಲಿವುಡ್ನ ದೊಡ್ಡ ತಾರೆಯರು ಹಾಗೂ ಭಾರತೀಯ ಚಿತ್ರರಂಗದ ಪ್ರಮುಖ ಕಲಾವಿದರು ಒಂದೇ ಪ್ರಾಜೆಕ್ಟ್ನಲ್ಲಿ ಕಾಣಿಸಿಕೊಳ್ಳುತ್ತಿರುವುದು ಸಿನಿಪ್ರಿಯರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. ಅದರಲ್ಲೂ ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಚಿತ್ರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ.