ಯಾದಗಿರಿ: ಸಮಾಜದಲ್ಲಿ ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯ ಹೆಚ್ಚಿಸುವ ಹಾಗೂ ಭ್ರಷ್ಟಾಚಾರಮುಕ್ತ ಆಡಳಿತಕ್ಕೆ ಒತ್ತು ನೀಡುವ ಉದ್ದೇಶದಿಂದ ವಿಭಾಗೀಯ ಅಂಚೆ ಕಚೇರಿ ಹಾಗೂ ಉಪವಿಭಾಗದ ಮುಖ್ಯಸ್ಥರು ಮತ್. ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನು ನಿಷ್ಠೆ ಮತ್ತು ಜವಾಬ್ದಾರಿಯಿಂದ ನಿರ್ವಹಿಸಿದಾಗ ಮಾತ್ರ ಭ್ರಷ್ಟಾಚಾರಮುಕ್ತ ಸಮಾಜ ಹಾಗೂ ಉತ್ತಮ ಆಡಳಿತ ನಿರ್ಮಾಣ ಸಾಧ್ಯ ಎಂದರು.ಸರ್ಕಾರಿ ನೌಕರರು ತಮ್ಮ ದೈನಂದಿನ ಕರ್ತವ್ಯದಲ್ಲಿ ನೈತಿಕ ಮೌಲ್ಯ ಅಳವಡಿಸಿಕೊಳ್ಳುವುದು, ಸಾರ್ವಜನಿಕರೊಂದಿಗೆ ಪಾರದರ್ಶಕವಾಗಿ ವ್ಯವಹರಿಸುವುದು, ಸರ್ಕಾರಿ ಸಂಪನ್ಮೂಲಗಳನ್ನು ಜವಾಬ್ದಾರಿಯುತವಾಗಿ ಬಳಸುವುದು ಹಾಗೂ ಭ್ರಷ್ಟಾಚಾರ ತಡೆಗಟ್ಟಲು ಬದ್ಧರಾಗಿರುವುದು ಅತ್ಯಂತ ಅಗತ್ಯ ಎಂದು ಹೇಳಿದರು.ಪ್ರಾಮಾಣಿಕತೆಯು ಕೇವಲ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತವಾಗಿರದೆ, ಸಮಾಜದ ಪ್ರತಿಯೊಬ್ಬ ನಾಗರಿಕನ ಜೀವನದಲ್ಲೂ ಮುಖ್ಯ ಪಾತ್ರ ವಹಿಸುತ್ತದೆ.