ಬೆಂಗಳೂರು: ಔಷಧ, ವೈದ್ಯಕೀಯ ಉಪಕರಣಗಳು ಮತ್ತು ಬಳಕೆಯ ವಸ್ತುಗಳ ಮೂಲ ದರವನ್ನು ಬಹಿರಂಗವಾಗಿ ಪ್ರಕಟಿಸುವುದನ್ನು ಕಡ್ಡಾಯಗೊಳಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಖಾಸಗಿ ಆಸ್ಪತ್ರೆಗಳು ಹೈಕೋರ್ಟ್ ಮೆ. ಶೋಭಾ ಪ್ರಕಾಶ್, ಪ್ರಿಸ್ಟೈನ್ ಹಾಸ್ಪಿಟಲ್ಸ್ ಆೃಂಡ್ ರಿಸರ್ಚ್ ಸೆಂಟರ್ ಪ್ರೈ. ಹಾಲಗೆರೆ ಮಲ್ಲಿಕಾರ್ಜುನ ಪ್ರಸನ್ನ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.ಈ ವೇಳೆ ಸರ್ಕಾರದ ಪರ ವಕೀಲರು, ಸುತ್ತೋಲೆಯನ್ನು ಸರ್ಕಾರದ ಮಟ್ಟದಲ್ಲಿ ಪರಿಶೀಲಿಸುವ ಸಾಧ್ಯತೆಯಿದೆ. ಆದ್ದರಿಂದ ಒಂದು ದಿನದ ಮಟ್ಟಿಗೆ ಅರ್ಜಿ ವಿಚಾರಣೆಯನ್ನು ಮುಂದೂಡಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಾಲಯ, ಸರ್ಕಾರದ ನಿಲುವು ತಿಳಿಸುವಂತೆ ಹೆಚ್ಚುವರಿ ಸರ್ಕಾರಿ ವಕೀಲರಿಗೆ ಸೂಚಿಸಿತು.