ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ನಟಿಸಲಿರುವ ಮೊದಲ ಸಿನಿಮಾ ಬಗ್ಗೆ ಇಂಟರೆಸ್ಟಿಂಗ್ ವಿಷಯ ಕೇಳಿಬರುತ್ತಿದೆ. ನಿರ್ದೇಶನದಲ್ಲಿ ಕೈ ಸುಟ್ಟುಕೊಂಡಿರುವ ಜೇಸನ್ ಅವರು ಈಗ ಹೀರೋ ಆಗಲು ಹೊರಟಿದ್ದಾರೆ. ಅವರ ಸಿನಿಮಾಗೆ ಅಟ್ಲಿ ಅವರು ಬಂಡವಾಳ ಹೂಡುವ ಸಾಧ್ಯತೆ ಇದೆ. ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಅವರು ತಮ್ಮ ವೃತ್ತಿಜೀವನದಲ್ಲಿ ದೊಡ್ಡ ಬದಲಾವಣೆಗೆ ಮುಂದಾಗಿದ್ದಾರೆ. ನಿರ್ದೇಶನದಿಂದ ನಟನೆಯತ್ತ ಹೆಜ್ಜೆ ಇಡಲು ಸಜ್ಜಾಗಿರುವ ಅವರಿಗೆ ಖ್ಯಾತ ನಿರ್ದೇಶಕ ಅಟ್ಲಿ ಹಾಗೂ ‘ಡ್ಯೂಡ್’ ಖ್ಯಾತಿಯ ಕೀರ್ತೀಶ್ವರನ್ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.