ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರು ಸಿಡಿದೆದ್ದಿದ್ದಾರೆ. ನಾಳೆ ಬೆಳಗ್ಗೆ 11ಗಂಟೆಗೆ ಹೆದ್ದಾರಿ ಬಂದ್ಗೆ ನಿರ್ಧರಿಸಿದ್ದಾರೆ. ಈ ಮಧ್ಯೆ ಕಬ್ಬು ಬೆಳೆಗಾರರ ಬೇಡಿಕೆ ವಿಚಾರವಾಗಿ ಸಿಎಂ ಡಿಕೆ ಶಿವಕುಮಾರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಪತ್ರ ಬರೆದಿದ್ದಾರೆ. ಲಕ್ಷಾಂತರ ರೈತರ ಹಿತಾಸಕ್ತಿಗಾಗಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಬೆಂಗಳೂರು, ಅಕ್ಟೋಬರ್ 30: ಪ್ರತೀ ಟನ್ ಕಬ್ಬಿಗೆ 5500 ರೂ ದರ ನಿಗದೇ ಮಾಡಲೇಬೇಕು ಅಂತಾ ಕಬ್ಬು ಬೆಳೆಗಾರರು ಪಟ್ಟು ಹಿಡಿದಿದ್ದಾರೆ.