ಕಾರವಾರ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆದು ಜಿಲ್ಲೆಯ 6 ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಜಿಲ್ಲೆಯಲ್ಲಿ 5,70,006 ಪುರುಷರು, 5,69,614 ಮಹಿಳೆಯರು 3. ಜಿಲ್ಲೆಯಲ್ಲಿ 5,70,006 ಪುರುಷರು, 5,69,614 ಮಹಿಳೆಯರು 3 ತೃತೀಯ ಲಿಂಗಿಗಳು ಸೇರಿ ಒಟ್ಟು 11,39,623 ಮತದಾರರ ಹೆಸರನ್ನು ಸೇರಿಸಲಾಗಿದೆ.ಜಿಲ್ಲೆಯಲ್ಲಿ ಮೊದಲು 12.30 ಲಕ್ಷ ಹೆಸರುಗಳು ಮತದಾರರ ಪಟ್ಟಿಯಲ್ಲಿದ್ದವು. 45,581 ಮತದಾರರು ಬೇರೆ ವಿಧಾನಸಭಾ ಕ್ಷೇತ್ರಕ್ಕೆ ವಲಸೆ ಹೋಗಿದ್ದರು. ಎರಡೆರಡು ಕಡೆ ಹೆಸರಿರುವ 12,731 ಮತದಾರರನ್ನು ಕೈಬಿಡಲಾಗಿತ್ತು. ಆಗಸ್ಟ್ 24 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. 65, 330 ಮತದಾರರಿಗೆ ಖುದ್ದಾಗಿ ಹಾಜರಾಗಿ ದಾಖಲೆಗಳನ್ನು ಹಾಜರು ಮಾಡುವಂತೆ ನೋಟಿಸ್ ಜಾರಿ ಮಾಡಲಾಗಿತ್ತು.