ಭಾರತ ಎ ಮತ್ತು ನ್ಯೂಝಿಲೆಂಡ್ ಎ ತಂಡಗಳ ನಡುವಣ ಮೂರು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿ ಎರಡನೇ ಮ್ಯಾಚ್ ಶುರುವಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ದೇವದತ್ ಪಡಿಕ್ಕಲ್ ಹಾಗೂ ಧ್ರುವ್ ಜುರೆಲ್ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಕ್ರೈಸ್ಟ್ಚರ್ಚ್ನಲ್ಲಿ ನಡೆಯುತ್ತಿರುವ ಭಾರತ ಎ ಮತ್ತು ನ್ಯೂಝಿಲೆಂಡ್ ಎ ತಂಡಗಳ ನಡುವಣ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ದೇವದತ್ ಪಡಿಕ್ಕಲ್ ಹಾಗೂ ಧ್ರುವ್ ಜುರೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ಎ ತಂಡದ ನಾಯಕ ರೈಸ್ ಮಾರಿಯು ಬೌಲಿಂಗ್ ಆಯ್ದುಕೊಂಡರು.