ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡು ನಂತರ ಬೆಂಕಿ ಹೊತ್ತಿಕೊಂಡಿದೆ. ಸಮಯಪ್ರಜ್ಞೆ ಮೆರೆದ ಚಾಲಕ ಮತ್ತು ನಿರ್ವಾಹಕರು ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಾಂತ್ರಿಕ ದೋಷವೇ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಬೆಂಗಳೂರು, ಅಕ್ಟೋಬರ್ 31: ಬೆಂಗಳೂರಿನ ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ಬಿಎಂಟಿಸಿ ಬಸ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಲಿಸುತ್ತಿದ್ದ ಬಸ್ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ತಕ್ಷಣ ಚಾಲಕ ಮತ್ತು ನಿರ್ವಾಹಕರು ಸಮಯ ಪ್ರಜ್ಞೆ ಮೆರೆದು ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಬಸ್ನಿಂದ ಕೆಳಗಿಳಿಸಿದ್ದಾರೆ.