ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದ್ದು, ರೈತರು ರಸ್ತೆಗಳಲ್ಲಿ ಟೆಂಟ್ ಹಾಕಿ, ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿ ಟನ್ ಕಬ್ಬಿಗೆ 5,500 ರೂ ನಿಗದಿಪಡಿಸಬೇಕು ಹಾಗೂ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ರೈತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು, ಅಕ್ಟೋಬರ್ 31: ಪ್ರತಿ ಟನ್ ಕಬ್ಬಿಗೆ 5 ಸಾವಿರದ 500 ರೂ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಪಟ್ಟು ಹಿಡಿದು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಕರ್ನಾಟಕ ಬಂದ್ಗೆ ಕರೆ ನೀಡಿದ್ದ ರೈತರು, ಹೆದ್ದಾರಿ ಬಂದ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಬಂದ್ ನಡುವೆಯೂ ರೋಡಿಗಿಳಿದಿದ್ದ ಬಸ್ಗಳಿಗೆ ಬೆಳಗಾವಿಯಲ್ಲಿ ಮುತ್ತಿಗೆ ಹಾಕಿದರು.