ಬೆಂಗಳೂರು : ರೈಲು ಗಾಲಿ ಕಾರ್ಖಾನೆಯ ವತಿಯಿಂದ ಜಾಗೃತ ಅರಿವು ಸಪ್ತಾಹ 2026ರ ಸಮಾರೋಪ ಸಮಾರಂಭ ಹಾಗೂ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.‘ಸಮೃದ್ಧಿಗಾಗಿ ಪ್ರಾಮಾಣಿಕತೆ’ (ಪ್ರೊಬಿಟಿ ಫಾರ್. ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆ ಮತ್ತು ಸತ್ಯನಿಷ್ಠೆ ಬೆಳೆಸುವ ಉದ್ದೇಶದಿಂದ ಕೆವಿ ಆರ್ಡಬ್ಲ್ಯುಎಫ್ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರಕಲೆ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಸಮಾರೋಪದಲ್ಲಿ ಭ್ರಷ್ಟಾಚಾರ ವಿರೋಧಿ ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶಿಸಿ, ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ಖಾನೆಯ ಜನರಲ್ ಮ್ಯಾನೇಜರ್ ಮನೋರಂಜನ್ ಪ್ರಧಾನ್, ಜಾಗೃತಿಯು ಎಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ. ರಾಷ್ಟ್ರೀಯ ಸಮೃದ್ಧಿಗಾಗಿ ಪ್ರತಿಯೊಬ್ಬರೂ ಪ್ರಾಮಾಣಿಕತೆಯ ಮೌಲ್ಯಗಳನ್ನು ಪಾಲಿಸಬೇಕು ಎಂದು ಹೇಳಿದರು.