ಕಾರವಾರ: ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಮಾಜಿ ಸಂಸದ ನಳಿನಕುಮಾರ್ ಕಟೀಲ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಪ್ರಜಾಪ್. ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯ ಸಂಸ್ಥೆಗಳ ಮೇಲಿನ ವಿಶ್ವಾಸಕ್ಕೆ ಧಕ್ಕೆಯಾಗದಂತೆ ರಾಜಕೀಯ ಪಕ್ಷಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಆದರೆ, ದೇಶದ ಸಾಂವಿಧಾನಿಕ ಸಂಸ್ಥೆಗಳ ಕಾರ್ಯವೈಖರಿ ಕುರಿತು ಜನರಲ್ಲಿ ಅನುಮಾನ ಮೂಡಿಸುವ ರೀತಿಯಲ್ಲಿ ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ ಎಂದರು. ರಾಜಕೀಯ ಭಿನ್ನಾಭಿಪ್ರಾಯಗಳ ಹೆಸರಿನಲ್ಲಿ ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವುದು ಸರಿಯಲ್ಲ ಎಂಬುದು ಬಿಜೆಪಿಯ ನಿಲುವಾಗಿದೆ.