ರವಿ ತೇಜ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಇರುಮುಡಿ’ ಸಿನಿಮಾ ಇತ್ತೀಚೆಗೆ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಮಟ್ಟದ ಯಶಸ್ಸು ಕಂಡಿತ್ತು. ಆದರೆ, ಸಿನಿಮಾ ಯಶಸ್ಸಿನ ಅಲೆಯಲ್ಲಿರುವಾಗಲೇ ಕಾನೂನು ಸಂಕಷ್ಟ ಎದುರಾಗಿದ್ದು, ನಿರ್ಮಾಣ ಸಂಸ್ಥೆಗೆ ಕಾರ್ಮಿಕ ಇಲಾಖೆ ನೋಟಿಸ್ ಕಳಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.. ಭಾರತೀಯ ಚಿತ್ರರಂಗದಲ್ಲಿ ಬಾಲ ಕಲಾವಿದರನ್ನು ಅಭಿನಯಕ್ಕೆ ಮತ್ತು ಪ್ರಚಾರಕ್ಕೆ ಬಳಸಿಕೊಳ್ಳುವ ವಿಚಾರದಲ್ಲಿ ಕಾನೂನು ನಿಯಮಗಳು ಅತ್ಯಂತ ಕಟ್ಟುನಿಟ್ಟಾಗಿವೆ. ಇದೀಗ ಟಾಲಿವುಡ್ ನಟ ರವಿ ತೇಜ ಅಭಿನಯದ, ಬಾಕ್ಸ್ ಆಫೀಸ್ನಲ್ಲಿ ಭಾರಿ ಯಶಸ್ಸು ಕಂಡಿರುವ ‘ಇರುಮುಡಿ’ ಸಿನಿಮಾದ ನಿರ್ಮಾಪಕರಿಗೆ ತೆಲಂಗಾಣ ಕಾರ್ಮಿಕ ಇಲಾಖೆ ಕಾನೂನು ನೋಟಿಸ್ ಜಾರಿ ಮಾಡಿದೆ.