ಗೋವಿಂದರಾಜು ಚಿನ್ನಕುರ್ಚಿ ಬೆಂಗಳೂರುಎಪ್ಪತ್ತೊಂದನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡದ ಅಸ್ಮಿತೆ ನಾಡಧ್ವಜವನ್ನು ಅಧಿಕೃತವಾಗಿ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸಿಎ. ಶಿವಕುಮಾರ್ ಭಾನುವಾರ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯೋತ್ಸವ ಸಮಾರಂಭದಲ್ಲಿ ಈ ಕುರಿತು ಘೋಷಣೆ ಮಾಡುವ ನಿರೀಕ್ಷೆ ಇದೆ. ನಾಡಧ್ವಜ ಸಂಬಂಧ ಈಗಾಗಲೇ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿರುವ ರಾಜ್ಯ ಸರ್ಕಾರಕ್ಕೆ ಈವರೆಗೂ ಯಾವುದೇ ಉತ್ತರ ಬಂದಿಲ್ಲ. ನಾಡಧ್ವಜ ಹೊಂದಲು ಸಾಂವಿಧಾನಿಕ ಮಾನ್ಯತೆ ಇದೆಯೇ ಇಲ್ಲವೇ ಎಂಬ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಕರ್ನಾಟಕಕ್ಕೆ ಪ್ರತ್ಯೇಕ ನಾಡಧ್ವಜವನ್ನು ಘೋಷಣೆ ಮಾಡುವ ಮೂಲಕ ಹೊಸ ಇತಿಹಾಸ ಬರೆಯಲು ರಾಜ್ಯ ಸರ್ಕಾರ ಸಜ್ಜಾಗಿದೆ.