Measures to curb pollution in Delhi: ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಬಿಎಸ್-6 ವಾಹನ ನಿಯಮಗಳು ಜಾರಿಗೆ ಬಂದಿವೆ. ದೆಹಲಿಗೆ ಬರುವ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಗುತ್ತಿದೆ. ಬಿಎಸ್-6 ಅಲ್ಲದ ವಾಹನಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇದರಿಂದ, ದೆಹಲಿ-ಗುರುಗ್ರಾಮ್ ಗಡಿಯಲ್ಲಿ ವಾಹನ ದಟ್ಟಣೆ ಹೆಚ್ಚು ತೀವ್ರಗೊಂಡಿದೆ. ನವದೆಹಲಿ, ನವೆಂಬರ್ 1: ದೆಹಲಿ-ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನವೆಂಬರ್ 1ರಿಂದ ಕಟ್ಟುನಿಟ್ಟಾದ ಕ್ರಮಗಳನ್ನು ದೆಹಲಿ ಸರ್ಕಾರ ಜಾರಿಗೊಳಿಸಿದೆ. ಅದರಲ್ಲಿ ಬಿಎಸ್-6 (BS-VI) ಪ್ರಮಾಣ ಅಲ್ಲದ ವಾಹನಗಳ ನಿರ್ಬಂಧವೂ ಸೇರಿದೆ.