ಬೀದರ್: ಪತ್ರಕರ್ತ ಮಲ್ಲಿಕಾರ್ಜುನ ಮರಕಲೆ ಅವರು ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ನೀಡಲಾಗುವ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.ನಗರದ ನೆಹರೂ ಕ. ನಿಷ್ಪಕ್ಷಪಾತ, ವಸ್ತು ನಿಷ್ಠ ವರದಿಗಳ ಮೂಲಕ ಜಿಲ್ಲೆಯಲ್ಲಿ ಹೆಸರಾಗಿದ್ದಾರೆ. ಸರ್ಕಾರದ ಗಮನ ಸೆಳೆದು, ಅನೇಕ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ ಶ್ರೇಯಸ್ಸು ಅವರಿಗೆ ಇದೆ.ರಾಜ್ಯಮಟ್ಟದ ಪತ್ರಿಕೆಗಳು ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ರಿಪಬ್ಲಿಕ್ ಕನ್ನಡ ಸುದ್ದಿ ವಾಹಿನಿಯ ಜಿಲ್ಲಾ ವರದಿಗಾರಾಗಿದ್ದಾರೆ.ಹಿರಿಯ ಪತ್ರಕರ್ತರಾಗಿರುವ ಅವರು ಯುವ ಪತ್ರಕರ್ತರಿಗೆ ಮಾರ್ಗದರ್ಶಿಯಾಗಿದ್ದಾರೆ.ಮರಕಲೆ ಅವರಿಗೆ ಪ್ರಶಸ್ತಿ ಲಭಿಸಿದ್ದಕ್ಕೆ ಅನೇಕರು ಸಂತಸ ವ್ಯಕ್ತಪಡಿಸಿದ್ದಾರೆ.