ಬೀದರ್: ಜಿಲ್ಲೆಯ ಖಾಸಗಿ ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕವು ಭಾನುವಾರ ಆಗ್ರಹ ಪತ್ರ ಅಭಿಯಾನ ಆರಂಭಿಸಿತು.ಅಭಿಯಾನದ. ನಾರಾಯಣಗೌಡರ ಸೂಚನೆ ಮೇರೆಗೆ ನವೆಂಬರ್ 30 ರ ವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸೋಮನಾಥ ಮುಧೋಳ ತಿಳಿಸಿದರು.ಕರ್ನಾಟಕದ ನೆಲ, ಜಲ, ವಿದ್ಯುತ್, ರಸ್ತೆ, ಮೂಲಸೌಕರ್ಯ, ಮಾನವ ಸಂಪನ್ಮೂಲ, ಸಾರ್ವಜನಿಕ ವ್ಯವಸ್ಥೆ ಹಾಗೂ ಸರ್ಕಾರದ ನೀತಿಗಳ ಪ್ರಯೋಜನ ಪಡೆದು, ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುವ ಸಂಸ್ಥೆಗಳು ನಾಡಿನ ಜನರ ಉದ್ಯೋಗದ ಆಶೋತ್ತರಗಳಿಗೂ ಸ್ಪಂದಿಸಬೇಕಾಗಿದೆ. ಇದು ಕರ್ನಾಟಕದಲ್ಲಿನ ಖಾಸಗಿ ಕಾರ್ಖಾನೆಗಳು ಹಾಗೂ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಕೂಡ ಆಗಿದೆ ಎಂದು ಹೇಳಿದರು.