ಗುರುಪುರ: ಕುಡಿತ ಮೂಲೋಚ್ಛಾಟನೆ ಕಷ್ಟವಾಗಿದ್ದರೂ ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಯತ್ನ ಶ್ಲಾಘನೀಯ. ಕುಡಿತದಿಂದ ವ್ಯಕ್ತಿಯ ಆರೋಗ್ಯ ಕೆಟ್ಟರೆ ಕುಟುಂಬದ ನೆಮ್ಮದಿ ಹಾಳಾಗುತ್ತದೆ. ದ. ದೃಢ ಸಂಕಲ್ಪದಿಂದ ಈ ವ್ಯಸನದಿಂದ ಹೊರಬಂದು ಗೌರವಯುತ ಜೀವನ ನಡೆಸಲು ಸಾಧ್ಯವಿದೆ ಎಂದು ಗುರುಪುರ ಶ್ರೀ ಜಂಗಮ ಸಂಸ್ಥಾನ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಜಜಪೆ ಯೋಜನಾ ಕಚೇರಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬಜ್ಪೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟ.