ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿರುವ ನಡುವೆ ವಾಯುಮಾಲಿನ್ಯವೂ ಏರಿಕೆಯಾಗುತ್ತಿದೆ. ಮೂರು ವರ್ಷಗಳ ಅಧ್ಯಯನದಲ್ಲಿ ಬಿಎಂಟಿಸಿ ಚಾಲಕರು, ಸಂಚಾರ ಪೊಲೀಸರು, ಕಟ್ಟಡ ಹಾಗೂ ಪೌರಕಾರ್ಮಿಕರಲ್ಲಿ ಉಸಿರಾಟ ಸಮಸ್ಯೆ ಹೆಚ್ಚುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಸಿಬ್ಬಂದಿ ಮಾಸ್ಕ್ ಬಳಕೆ ಮಾಡದೇ ಇರುವುದೂ ಸಮಸ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಬೆಂಗಳೂರು, ನವೆಂಬರ್ 2: ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರೊಂದಿಗೆ ವಾಯುಮಾಲಿನ್ಯದ ಪ್ರಮಾಣವೂ ಏರಿಕೆಯಾಗುತ್ತಿದೆ. ನಗರದ ರಸ್ತೆಗಳಲ್ಲಿ ದೀರ್ಘಕಾಲ ಕೆಲಸ ಮಾಡುವ ಬಿಎಂಟಿಸಿ ಚಾಲಕರು, ನಿರ್ವಾಹಕರು, ಸಂಚಾರ ಪೊಲೀಸ್ ಸಿಬ್ಬಂದಿ, ಕಟ್ಟಡ ಕಾರ್ಮಿಕರು ಹಾಗೂ ಪೌರಕಾರ್ಮಿಕರ ಆರೋಗ್ಯದ ಮೇಲೆ ವಾಯುಮಾಲಿನ್ಯದ ಪರಿಣಾಮ ಹೆಚ್ಚಾಗುತ್ತಿರುವ ಆತಂಕಕಾರಿ ಮಾಹಿತಿ ಅಧ್ಯಯನವೊಂದರಲ್ಲಿ ಬೆಳಕಿಗೆ ಬಂದಿದೆ.