ಫ್ಲೋರಿಡಾದ ಪಾಮ್ ಬೀಚ್ನಲ್ಲಿ ಟ್ರಂಪ್ ನಿವಾಸದ ಸಮೀಪ ಖಾಸಗಿ ಜೆಟ್ ವಿಮಾನ ಪತನಗೊಂಡು ಭೀಕರ ದುರಂತ ಸಂಭವಿಸಿದೆ. ನವೆಂಬರ್ 1ರಂದು ನಡೆದ ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಪೈಲಟ್ಗಳು ಹವಾಮಾನ ವೈಪರೀತ್ಯದ ಬಗ್ಗೆ ಮಾಹಿತಿ ನೀಡಿದ್ದು, ವಿಮಾನ ಪತನಕ್ಕೆ ನಿಖರ ಕಾರಣಕ್ಕಾಗಿ FAA ಮತ್ತು NTSB ತನಿಖೆ ಕೈಗೊಂಡಿವೆ. ಸುತ್ತಮುತ್ತಲಿನ 600 ಜನರನ್ನು ಸ್ಥಳಾಂತರಿಸಲಾಗಿದೆ. ಫ್ಲೋರಿಡಾ, ನವೆಂಬರ್ 02: ಅಮೆರಿಕದ ಫ್ಲೋರಿಡಾ ರಾಜ್ಯದ ಪಾಮ್ ಬೀಚ್ ಕೌಂಟಿಯ ಜನವಸತಿ ಪ್ರದೇಶದ ಸಮೀಪ ಖಾಸಗಿ ಜೆಟ್ ವಿಮಾನವೊಂದು ಪತನಗೊಂಡು ಭೀಕರ ದುರಂತ ಸಂಭವಿಸಿದೆ. ಈ ಅಪಘಾತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿವಾಸದ ಬಳಿಯೇ ನಡೆದಿದೆ.