ಹಾಸನಾಂಬೆ ದರ್ಶನೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡರು ಅಖಾಡಕ್ಕಿಳಿದು ರೈಡ್ ಮಾಡುವ ಮೂಲಕ ಚಾಲನೆ ನೀಡಿದರು. ಸ್ವತಃ ರೈಡರ್ ಆಗಿ ಕಣಕ್ಕಿಳಿದು ಆಟಗಾರರನ್ನು ಹುರಿದುಂಬಿಸಿದ ಸಚಿವರನ್ನು ಜನ ಚಪ್ಪಾಳೆ, ಸಿಳ್ಳೆಗಳ ಮೂಲಕ ಸ್ವಾಗತಿಸಿದರು. ಹಾಸನಾಂಬೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಂತಹ ಕ್ರೀಡಾಕೂಟ ಆಯೋಜಿಸಲಾಗಿದೆ. ಹಾಸನ, ನವೆಂಬರ್ 2: ಹಾಸನದಲ್ಲಿ ನಡೆಯುತ್ತಿರುವ ಐತಿಹಾಸಿಕ ಹಾಸನಾಂಬೆ ದರ್ಶನೋತ್ಸವದ ಹಿನ್ನೆಲೆಯಲ್ಲಿ, ಇದೇ ಮೊದಲ ಬಾರಿಗೆ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಸಚಿವರು ಸ್ವತಃ ರೈಡರ್ ಆಗಿ ಕಬಡ್ಡಿ ಕಣಕ್ಕಿಳಿದು, ಕ್ರೀಡಾಪಟುಗಳಿಗೆ ಮತ್ತು ಸಾರ್ವಜನಿಕರಿಗೆ ಸ್ಫೂರ್ತಿ ತುಂಬಿದರು.