ದೇಶಾದ್ಯಂತ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಕಾಂಗ್ರೆಸ್ ಪಕ್ಷವು ಅಕ್ರಮ ಬಾಂಗ್ಲಾದೇಶಿ ನುಸುಳುಕೋರರನ್ನು ರಕ್ಷಿಸಲು ಯತ್ನಿಸುತ್ತಿದೆ. ಆದರೆ, ಬಿಜೆಪಿ ಮತದಾರರ ಪಟ್ಟಿಯಿಂದ ಪ್ರತಿಯೊಬ್ಬ ನುಸುಳುಕೋರನ ಹೆಸರನ್ನು ತೆಗೆದುಹಾಕುವುದು ಖಚಿತ" ಎಂದು ಅವರು ಘೋಷಿಸಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಬಿಜೆಪಿಯ ಪ್ರಜಾಪ್ರಭುತ್ವ ಉಳಿಸಿ' ಬೃಹತ್ ಪಾದಯಾತ್ರೆಯ ಮುಕ್ತಾಯದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, "ಭಾರತದ ಪ್ರಜೆಗಳಿಗೆ ಮಾತ್ರ ದೇಶದ ಚುನಾವಣೆಗಳಲ್ಲಿ ಮತ ಚಲಾಯಿಸುವ ಹಕ್ಕಿರುತ್ತದೆ" ಎಂದು ಸ್ಪಷ್ಟಪಡಿಸಿದರು.