ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗಿರುವ ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ, ಅಧಿಕಾರದಿಂದ ಇಳಿದ ಬಳಿಕ ತಮ್ಮ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಬೇಸರ ಹೊರಹಾಕಿದ್ದು. ಸ್ಟಿಂಗ್ ವಿಚಾರ ಪ್ರಸ್ತಾಪಿಸಿ, ಇದೆಲ್ಲ ಕೆಲವರು ಸೃಷ್ಟಿಸಿದ ಬೆಳವಣಿಗೆ ಎಂದಿದ್ದಾರಂತೆ. ರಾಹುಲ್ ಗಾಂಧಿ ಭೇಟಿಗೂ ಮುನ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನೂ ಸಿದ್ದರಾಮಯ್ಯ ಭೇಟಿಯಾಗಿದ್ದರು. ನವದೆಹಲಿ, ನವೆಂಬರ್ 02: ದೆಹಲಿಯ ಟೆನ್ ಜನ್ಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯನ್ನ ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.