ವಿಜಯವಾಣಿ ಸುದ್ದಿಜಾಲ ಕುಂದಾಪುರ ಗಂಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಚ್ ರೋಡ್ ಪ್ರದೇಶದಲ್ಲಿರುವ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದ ವಠಾರದಲ್ಲಿ ರಾತ್ರೋರಾತ್ರಿ ತ್ಯಾಜ್ಯಗಳನ್ನು ಸುರಿಯಲ. ಗಂಗೊಳ್ಳಿ ಚರ್ಚ್ ಸಮೀಪ ಮುಚ್ಚಲ್ಪಟ್ಟಿರುವ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿರುವ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದ ವಠಾರದಲ್ಲಿ ಅಂಗನವಾಡಿ ಕೇಂದ್ರಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳನ್ನು ರಾಶಿ ಹಾಕಿರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.ಪತ್ತೆಗೆ ಆಗ್ರಹ ಅಂಗನವಾಡಿ ಕೇಂದ್ರದಲ್ಲಿ ತ್ಯಾಜ್ಯ ವಿಲೇವಾರಿ ಮಾಡಿರುವುದರಿಂದ ಅಂಗನವಾಡಿ ಪುಟಾಣಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿದ್ದು, ತ್ಯಾಜ್ಯ ಹಾಕಿದವರನ್ನು ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಳ್ಳಬೇಕೆಂದು ಪಾಲಕರು ಆಗ್ರಹಿಸಿದ್ದಾರೆ.