ಚಿತ್ರದುರ್ಗ: ನಗರದ ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಅಗ್ನಿವೀರ್ ಸೇನಾ ನೇಮಕಾತಿಯ ರ್ಯಾಲಿ ಆರಂಭವಾಯಿತು. ಈಗಾಗಲೇ ಆನ್ಲೈನ್ನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ. ಈಗಾಗಲೇ ಆನ್ಲೈನ್ನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ(ಸಿಇಇ) ಅರ್ಹತೆ ಪಡೆದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಹಾಸನ, ಕೊಡಗು, ವಿಜಯನಗರ ಹಾಗೂ ಚಿತ್ರದುರ್ಗ ಸೇರಿದಂತೆ ೧೪ ಜಿಲ್ಲೆಗಳಿಂದ ೯೫೭ ಅಭ್ಯರ್ಥಿಗಳು ನ.೩ರ ವರೆಗೆ ನಡೆಯಲಿರುವ ಈ ರ್ಯಾಲಿಯಲ್ಲಿ ಭಾಗವಹಿಸಿದ್ದರು.ಬೆಂಗಳೂರು ಸೇನಾ ನೇಮಕಾತಿ ಕಚೇರಿಯ ಬ್ರಿಗೇಡಿಯರ್ ಎಸ್.ಕೆ. ಕಾಂತರಾಜ್ ಹಾಗೂ ದೈಹಿಕ ಕ್ಷಮತೆ ಪರೀಕ್ಷೆಗಳ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.