ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ 2027ರ ಹರಾಜಿಗೆ ಸಂಬಂಧಿಸಿದಂತೆ ಕ್ರಿಕೆಟ್ ವಲಯದಲ್ಲಿ ಹರಿದಾಡುತ್ತಿದ್ದ ಅತ್ಯಂತ ದೊಡ್ಡ ವದಂತಿಯೊಂದಕ್ಕೆ ಈಗ ತೆರೆ ಬಿದ್ದಿದೆ. ಬ್ರಿಟಿಷ್ ನಾಗರಿಕತ್ವದ ಕೋಟಾದಡಿ ಐಪಿಎಲ್ ಪ್ರವೇಶಿಸಲಿದ್ದಾರೆ ಎನ್ನಲಾಗಿದ್ದ ಪಾಕ್ ಮಾಜಿ ವೇಗಿ ಮೊಹಮ್ಮದ್ ಅಮಿರ್, ಈ ಸುದ್ದಿಯನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (IPL 2027) ಸೀಸನ್-20ರ ಮಿನಿ ಹರಾಜಿಗೆ ಪಾಕಿಸ್ತಾನ್ ತಂಡದ ಮಾಜಿ ವೇಗದ ಬೌಲರ್ ಮೊಹಮ್ಮದ್ ಅಮಿರ್ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ಇದೀಗ ಈ ಎಲ್ಲಾ ಸುದ್ದಿಗಳಿಗೆ ಖುದ್ದು ಅಮಿರ್ ಅವರೇ ಸ್ಪಷ್ಟನೆ ನೀಡುವ ಮೂಲಕ ಬ್ರೇಕ್ ಹಾಕಿದ್ದಾರೆ.